ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ! ಗ್ಯಾರೆಂಟಿ ಖ್ಯಾತಿಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ | Karnataka Pu Evaluation Allowance Not Received From Four Month
ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ನಿಯೋಜಿಸಲಾಗಿದ್ದ ಸುಮಾರು 65 ಸಾವಿರ ಶಿಕ್ಷಕರಿಗೆ ನಾಲ್ಕು ತಿಂಗಳಾದರೂ ಸಂಭಾವನೆ ಸಿಕ್ಕಿಲ್ಲ. ಒಟ್ಟು ₹75 ಕೋಟಿ ಬಾಕಿ ಉಳಿದಿದ್ದು, ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಮಕೃಷ್ಣ ದಾಸರಿ ರಾಯಚೂರು (ಜು.31): ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 1, 2 ಮತ್ತು 3ರ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಸಂಭಾವನೆ ಇನ್ನು ಸಂದಾಯವಾಗಿಲ್ಲ. ಕಳೆದ ನಾಲ್ಕು ತಿಂಗಳಿನಿಂದ ಸಂಭಾವನೆ ವಿಳಂಬವಾಗುತ್ತಿದೆ ಎಂದು ಗ್ಯಾರಂಟಿ ಖ್ಯಾತಿಯ ರಾಜ್ಯ ಸರ್ಕಾರದ ವಿರುದ್ಧ ಮೌಲ್ಯಮಾಪಕರು ತೀವ್ರ…