ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಅಧೀರ್ ರಂಜನ್ ಮೇಲೆ ಶಸ್ತ್ರ ಹೊಂದಿದ್ದವರಿಂದ ಅಟ್ಯಾಕ್! | Attack Attempt On Congress Leader Adhir Ranjan Chowdhury During Campaign In West Bengal Gdp
ಪಶ್ಚಿಮ ಬಂಗಾಳದ ಬೆರ್ಹಾಂಪೋರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಎರಡೂ ಪಕ್ಷಗಳ ನಡುವೆ ತಳ್ಳಾಟ-ನೂಕಾಟಕ್ಕೆ ಕಾರಣವಾಗಿ, ಪ್ರದೇಶದಲ್ಲಿ ತೀವ್ರ ರಾಜಕೀಯ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಮಧ್ಯೆ ರಾಜಕೀಯ ಉದ್ವಿಗ್ನತೆ ತಾರಕ್ಕೇರಿದ್ದು, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಅಧೀರ್ ರಂಜನ್ ಚೌಧರಿ ಅವರ ಮೇಲೆ ದಾಳಿ ಯತ್ನ ನಡೆದಿದೆ. ಟಿಎಂಸಿ…