ಕಾಂಗ್ರೆಸ್‌ನಲ್ಲಿ ಸೆಪ್ಟೆಂಬರ್ ಕ್ರಾಂತಿ..ಬಿಜೆಪಿಯಲ್ಲೂ ಬದಲಾಗುತ್ತಾ ಕುರ್ಚಿ? ಕುತೂಹಲ ಮೂಡಿಸಿದ ಇಂದಿನ ರಹಸ್ಯ ಸಭೆ
ಬೆಂಗಳೂರು, (ಜೂನ್ 27): ಕಾಂಗ್ರೆಸ್ ನಲ್ಲಿ (Congress) ಬದಲಾವಣೆ ಮಾತುಗಳು ಕೇಳಿಬರುತ್ತಿವೆ. ಸೆಪ್ಟೆಂಬರ್ ನಲ್ಲಿ ಮಹತ್ವದ ಬದಲಾವಣೆಗಳಾಗಲಿವೆ ಎಂದು ಹಿರಿಯ ನಾಯಕ, ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನೊಂದೆಡೆ ಬಿಜೆಪಿ (BJP) ಪಾಳೆಯದಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷದಲ್ಲಿನ ಮಹತ್ವದ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ದೆಹಲಿ ಹೋಗಿ ಬಮದ ಬಳಿಕ ಕೆಲ ಬದಲಾವಣೆಯಾಗಲಿವೆ ಎನ್ನುವ ಮಾತುಗಳನ್ನಾಡಿದ್ದು. ಇನ್ನು ವಿಪಕ್ಷ ನಾಯಕ ಆರ್ ಅಶೋಕ್…