ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ
ಬೆಂಗಳೂರು/ಚಾಮರಾಜನಗರ , (ಜೂನ್ 26): ಚಾಮರಾಜನಗರ (Chamarajnagara) ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ (male mahadeshwara forest) ವಲಯದಲ್ಲಿ ತಾಯಿ ಹುಲಿ (Tiger) ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿಪ್ರೇಮಿಗಳಲ್ಲಿ ಆತಂಕ ಉಂಟುಮಾಡಿದ್ದು, ಯಾರೋ ಕಿಡಿಗೇಡಿಗಳು ವಿಷಪ್ರಾಶನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre)…