ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕನ ಆಕ್ರೋಶ; 2 ದಿನದಲ್ಲಿ ರಾಜೀನಾಮೆ ಕೊಡೋದಾಗಿ ರಾಜು ಕಾಗೆ ಎಚ್ಚರಿಕೆ! | Congress Mla Raju Kage Explodes Over Work Order Delay Warns Of Resignation Sat
ಕಾಗವಾಡ ಶಾಸಕ ರಾಜು ಕಾಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನುದಾನ ವಿಳಂಬ ಹಾಗೂ ಆಡಳಿತ ವೈಫಲ್ಯದಿಂದ ಬೇಸತ್ತಿರುವ ಅವರು, ಶೀಘ್ರವಾಗಿ ಎರಡು ದಿನಗಳಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಬೆಳಗಾವಿ (ಜೂ. 23): ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನ ಮತ್ತೆ ಒಂದು ಸ್ಫೋಟಕ ಘಟ್ಟಕ್ಕೆ ತಲುಪಿದೆ. ಇದೀಗ ಕಾಂಗ್ರೆಸ್‌ನ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರು ನೇರವಾಗಿ ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು…