IND vs ENG: ಲೀಡ್ಸ್ ಟೆಸ್ಟ್ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್
ಲೀಡ್ಸ್ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿಕಿಟ್ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಇದೀಗ ಎರಡನೇ ಇನ್ನಿಂಗ್ಸ್ನಲ್ಲೂ ಸ್ಫೋಟಕ ಶತಕ ಸಿಡಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕ್ರೀಸ್ಗೆ ಬಂದ ಪಂತ್, ರಾಹುಲ್ ಜೊತೆಗೆ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದರು. 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಂತ್, ಆ ಬಳಿಕ ತಮ್ಮ ಗೇರ್ ಬದಲಿಸಿ ಉಳಿದ 50 ರನ್ಗಳನ್ನು ಕೇವಲ 47 ಎಸೆತಗಳಲ್ಲಿ ಕಲೆಹಾಕಿ ತಮ್ಮ ಟೆಸ್ಟ್ ವೃತ್ತಿಜೀವನದ…