ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ
ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (ಸಿದ್ದರಾಮಯ್ಯ) ಜೆಡಿಎಸ್ ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (ಎಚ್.ಡಿ.ಕುಮಾರಸ್ವಾಮಿ) ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…