ರಾಹುಲ್ ಗಾಂಧಿಯನ್ನ ಮೆಚ್ಚಿಸಲು ಡಿಕೆಶಿ ಕೇಂದ್ರದ ವಿರುದ್ಧ ಟೀಕೆ: ಪ್ರಲ್ಹಾದ್ ಜೋಶಿ ಖಡಕ್ ತಿರುಗೇಟು | Union Minister Pralhad Joshi Slams Dk Shivakumar At Hubballi Rav
ಎಲ್‌ಪಿಜಿ ಕೊರತೆ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆರೋಪಗಳನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಳ್ಳಿಹಾಕಿದ್ದಾರೆ. ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿ (ಏ.8): ಯುದ್ಧದಿಂದಾಗಿ ಇಡೀ ಜಗತ್ತೇ ತೈಲ, ಎಲ್‌ಪಿಜಿ ಸಮಸ್ಯೆ ಅನುಭವಿಸುತ್ತಿದೆ. ಇತರೆ ದೇಶಗಳಿಗಿಂತ ಭಾರತದಲ್ಲಿ ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿದ್ದೀರಿ ಎಂದಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್, ಈಗ ರಾಹುಲ್ ಗಾಂಧಿ ಮೆಚ್ಚಿಸಲು ತೈಲ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಇದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಲ್ಹಾದ್…