ಡೆಲ್ಲಿ ಕ್ಯಾಪಿಟಲ್ಸ್‌ಗೆ ಹ್ಯಾಟ್ರಿಕ್ ಗೆಲುವಿನ ಗುರಿ; ಆದ್ರೆ ಗುಜರಾತ್ ಟೈಟಾನ್ಸ್ ಎದುರು ಮ್ಯಾಚ್ ನಡಿಯೋದೇ ಅನುಮಾನ! | Delhi Capitals Eye Hat Trick Win Against Gujarat Titans Amid Rain Threat Kvn
ಐಪಿಎಲ್‌ನಲ್ಲಿ ಸತತ ಎರಡು ಗೆಲುವುಗಳಿಂದ ಬೀಗುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್, ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಮತ್ತೊಂದೆಡೆ, ಸತತ ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್ ಗೆಲುವಿನ ಹಾದಿಗೆ ಮರಳಲು ಹೋರಾಡಲಿದೆ. ಆದರೆ, ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ. ನವದೆಹಲಿ: ಈ ಬಾರಿ ಐಪಿಎಲ್‌ನಲ್ಲಿ ಆರಂಭಿಕ 2 ಪಂದ್ಯಗಳಲ್ಲೂ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹ್ಯಾಟ್ರಿಕ್ ಜಯದ ಕಾತರದಲ್ಲಿದ್ದು, ಬುಧವಾರ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಾಡಲಿದೆ. ಮೊದಲೆರಡು ಪಂದ್ಯದಲ್ಲೂ ಪರಾಭವಗೊಂಡಿರುವ ಗುಜರಾತ್ ಹ್ಯಾಟ್ರಿಕ್ ಸೋಲು ತಪ್ಪಿಸಲು ಹೋರಾಡಬೇಕಿದೆ….