ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ: ಸಹೋದರಿಯರ ಮೇಲೆ ರಾಡ್, ವೈರ್‌ನಿಂದ ಹಲ್ಲೆ ಆರೋಪ
ಧಾರವಾಡ, ಏ.11: ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮಾಜಿ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪು ಹೊರಬೀಳುವ ಹಂತದಲ್ಲಿದೆ. ಆದರೆ, ಇತ್ತ ಯೋಗೀಶ್ ಗೌಡ ಅವರ ಕುಟುಂಬದ ಆಸ್ತಿ ವಿಚಾರವಾಗಿ ದೊಡ್ಡ ಮಟ್ಟದ ಕಿತ್ತಾಟ ಶುರುವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ತೋಟದ ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಯೋಗೀಶ್ ಗೌಡ ಅವರ ಸಹೋದರ ಗುರುನಾಥ ಗೌಡ ಮತ್ತು ಸಹೋದರಿಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ವೇಳೆ…