ಪ್ರೇಮಿಗಳ ದಿನದ ಹೋಟೆಲ್ ಬುಕ್ಕಿಂಗ್‌ನಲ್ಲಿ ಶೇ.170ರಷ್ಟು ಹೆಚ್ಚಳ: ಭಾರತದ ಈ ತಾಣಗಳೇ ಹಾಟ್ ಫೇವರಿಟ್
<p>ಫೆಬ್ರವರಿ 14ರ ಪ್ರೇಮಿಗಳ ದಿನದ ಆಚರಣೆ ಇದೀಗ ಹೊಸ ರೂಪ ಪಡೆದುಕೊಂಡಿದೆ. ಉಡುಗೊರೆಗಳ ಬದಲಾಗಿ ಜೋಡಿಗಳು ಪ್ರವಾಸಕ್ಕೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೋಟೆಲ್ ಮತ್ತು ರೆಸಾರ್ಟ್‌ಗಳ ಬುಕ್ಕಿಂಗ್ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ.</p><img><p>ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಪ್ರೇಮಿಗಳ ದಿನದ ಆಚರಣೆಯಾಗಿ ಜೋಡಿಗಳು ಮಾತ್ರವಲ್ಲದೇ ದಂಪತಿಗಳು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಹಾಗಾಗಿ ಪ್ರವಾಸಿ ಸ್ಥಳಗಳಲ್ಲಿನ ಹೋಟೆಲ್, ಓಯೋ ರೂಮ್ ಬುಕ್ಕಿಂಗ್‌ನಲ್ಲಿ ಏರಿಕೆಯಾಗಿದೆ. ಫೆ.14ಕ್ಕೆ ರಜೆಗಳನ್ನು ಹೊಂದಾಣಿಕೆ ಮಾಡಿಕೊಂಡು…