ಕನ್ನಡಿಗರ ಮುಂದೆ ಆಟ ನಡೆಯಲ್ಲ- ಸೋತು ಶರಣಾದ ಸೋನು ನಿಗಮ್: ಹುಬ್ಬಳ್ಳಿಯಲ್ಲಿ ಕ್ಷಮೆಯಾಚನೆ
<p>ಕನ್ನಡಿಗರನ್ನು ಉಗ್ರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದ ಗಾಯಕ ಸೋನು ನಿಗಮ್, ಇದೀಗ ಕನ್ನಡಿಗರ ಕ್ಷಮೆ ಕೋರಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಕನ್ನಡಿಗರು ನನ್ನ ಕುಟುಂಬದವರು ಎಂದಿದ್ದಲ್ಲದೆ, ‘ಅನಿಸುತಿದೆ ಯಾಕೋ ಇಂದು’ ಹಾಡನ್ನು ಹಾಡಿ ರಂಜಿಸಿದ್ದಾರೆ.</p><img><p>ತಮ್ಮ ಅದ್ಭುತ ಕಂಠದಿಂದಲೇ ಖ್ಯಾತಿ ಪಡೆದಿರುವ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಿಟ್ ಹಾಡುಗಳನ್ನು ಕೊಟ್ಟವರು ಬಾಲಿವುಡ್ ಗಾಯಕ ಸೋನು ನಿಗಮ್. ಮುಂಗಾರು ಮಳೆ ಸಿನಿಮಾಕ್ಕೆ ಅವರ ಕಂಠದಿಂದ ಮೂಡಿ ಬಂದ ಹಾಡುಗಳು ಇಂದಿಗೂ ಸೂಪರ್ ಹಿಟ್ಟೇ. ಆದರೆ, ಕೆಲ…