SSLC ತೃತೀಯ ಭಾಷೆಗೆ ಗ್ರೇಡ್ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ
ಬೆಂಗಳೂರು, ಏಪ್ರಿಲ್ 03: ಎಸ್.ಎಸ್.ಎಲ್.ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪತ್ರವನ್ನು ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಈ ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ನಿರ್ಧರಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ ಒಕ್ಕೂಟ…