ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಗಲ್ವಾನ್ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’! | Political Storm Over Galwan Clash Army Book
ನಿವೃತ್ತ ಭಾರತೀಯ ಸೇನಾ ಮುಖ್ಯಸ್ಥ ಜ. ಎಂ.ಎಂ. ನರವಣೆ ಅವರ ಅಪ್ರಕಟಿತ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಚರಿತ್ರೆ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಏನಿದು ವಿವಾದ? ಪುಸ್ತಕದಲ್ಲಿ ಅಂಥದ್ದೇನಿದೆ? ರಾಹುಲ್ ಗಾಂಧಿ ಆರೋಪವೇನು? ಇತ್ಯಾದಿಗಳ ಮಾಹಿತಿ ಇಲ್ಲಿದೆ. -ದಿವ್ಯಾ ಹೆಗಡೆ ಕಬ್ಬಿನಗದ್ದೆ ಯಾರು ಜ. ನರವಣೆ? ಜ। ಎಂ.ಎಂ. ನರವಣೆ ಭಾರತೀಯ ಸೇನೆಯ 28ನೇ ಮುಖ್ಯಸ್ಥರಾಗಿದ್ದವರು. 2019ರ ಡಿ.31ರಿಂದ 2022ರ ಏ.30ರವರೆಗೆ ಈ ಹುದ್ದೆ ಅಲಂಕರಿಸಿದ್ದರು. 2020ರ ಜೂನ್ 15-16ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ…