ಸದ್ಯವೇ ತೆರೆ ಮೇಲೆ ‘ಕಪಟ ನಾಟಕ ಸೂತ್ರಧಾರಿ’ ಹೆಜ್ಜೆ; ಸಮುದಾಯಗಳ ಮಧ್ಯೆ ಸಂಘರ್ಷದ ಕಥೆ..? | Kapata Nataka Sutradhari Movie Trailers Released Before The Movie Release
ಭಾರತದ ಪ್ರಥಮ ನ್ಯೂ ಏಜ್ ಪೊಲಿಟಿಕಲ್ ಸಟೈರ್ ಸಿನಿಮಾ ಎಂಬುದೂ ಸೇರಿದಂತೆ ಒಂದಷ್ಟು ವಿಶೇಷತೆಗಳ ಮೂಲಕ ಗಮನ ಸೆಳೆದುಕೊಂಡಿದ್ದ ಚಿತ್ರವಿದು. ಬಿಡುಗಡೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಚಿತ್ರತಂಡ ಟ್ರೈಲರ್ ಅನ್ನು ಪ್ರೇಕ್ಷಕರ ಮುಂದಿಟ್ಟಿದೆ. ನಮ್ಮ ಸಮಾಜದಲ್ಲಿನ ಪ್ರಸ್ತುತ ಸ್ಥಿತಿಗತಿಗತಿಗಳು ಕನ್ನಡ ಸಿನಿರಂಗದಲ್ಲಿ ಹೊಸಬರ ಪ್ರವೇಶ ದಿನದಿನಕ್ಕೆ ಹೆಚ್ಚಾಗುತ್ತಿದೆ. ಹೊಸ ಹೊಸ ಪ್ರತಿಭೆಗಳು ನವನವೀನ ಪ್ರಯೋಗಗಳ ಮೂಲಕ ಸ್ಯಾಂಡಲ್‌ವುಡ್ ಚಿತ್ರರಂಗ ಹಾಗೂ ಪ್ರೇಕ್ಷಕರಿಗೆ ಹೊಸತನದ ರಸದೌತಣ ಉಣಬಡಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ‘ಕಪಟ ನಾಟಕ ಸೂತ್ರಧಾರಿ’. ಧೀರಜ್…