ಸಂಕ್ರಾಂತಿ ಬಳಿಕ ರಾಜಕೀಯ ವಿಫ್ಲವ; ರಾಜ್ಯಕ್ಕೂ ದೇಶಕ್ಕೂ ಕಂಟಕ: ಕೋಡಿಶ್ರೀ ಸ್ಫೋಟಕ ಭವಿಷ್ಯ! | Hassan Kodi Mutt Shri Prediction About Cm Siddaramaiah Karnataak And Indian Politics Rav
ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ಬದಲಾವಣೆಗಳಾಗಲಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹಾರನಹಳ್ಳಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ದುಃಖ, ಯುದ್ಧ, ಮತ್ತು ಅರಸನಾಲಯಕ್ಕೆ ಕಾರ್ಮೋಡ ಕವಿಯುವ ಬಗ್ಗೆಯೂ ಎಚ್ಚರಿಸಿದ್ದಾರೆ. ಅರಸೀಕೆರೆ (ಹಾಸನ) (ಜೂ.22): ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣ ಗೋಚರಿಸುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಿರೀಕ್ಷೆಗೂ ಮೀರಿದ…