ಆನ್ಲೈನ್ ಗೇಮಿಂಗ್ ಹಾವಳಿ ತಡೆಗೆ ಸೆಪ್ಟಂಬರಲ್ಲಿ ಮಾರ್ಗಸೂಚಿ: ಗೃಹ ಸಚಿವ ಪರಮೇಶ್ವರ್ | Online Gaming Guidelines September Says Dr G Parameshwar Gvd
ಕಳೆದ ಮೂರು ವರ್ಷಗಳಲ್ಲಿ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಗಳಿಗೆ ಸಂಬಂಧಿಸಿ 347 ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಆನ್‌ಲೈನ್ ಗೇಮಿಂಗ್‌ನಿಂದ ಆಗುತ್ತಿರುವ ಸಮಸ್ಯೆ ನಿವಾರಿಸಲು 2020ರಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ವಿಧಾನಸಭೆ (ಆ.13): ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಹಾವಳಿ ತಡೆಗೆ ಸೂಕ್ತ ಮಾರ್ಗಸೂಚಿ ರೂಪಿಸಲು ಡಿಜಿಪಿ ಪ್ರಣಬ್ ಮೋಹಂತಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಸೆಪ್ಟೆಂಬರ್‌ನಲ್ಲಿ ವರದಿ ನೀಡಲಿದೆ. ಅದರ ಆಧಾರದಲ್ಲಿ ಆನ್‌ಲೈನ್ ಗೇಮ್‌ಗಳನ್ನು ನಿಯಂತ್ರಿಸಲು ಸೂಕ್ತ ನಿಯಮ ರೂಪಿಸಲಾಗುವುದು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ತಿಳಿಸಿದರು….