ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಗೆ ಕಡಿವಾಣ ಹಾಕಿ: ಶಾಸಕ ವೇದವ್ಯಾಸ್ ಕಾಮತ್ | Protect Sanctity Dharmasthala Says Mla Vedavyas Kamath Gvd
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಪೂರ್ವಾಗ್ರಹ ಪೀಡಿತ ಅಜೆಂಡಾಗಳನ್ನು ಹೊಂದಿರುವವರು ಅಪಪ್ರಚಾರ ನಡೆಸುತ್ತಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿ ಭಕ್ತರು ಸಹನೆ ಕಳೆದುಕೊಳ್ಳಲು ಕಾರಣವಾಗುತ್ತಿದೆ. ಮಂಗಳೂರು (ಆ.11): ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಮಂಗಳೂರು…