Dharmasthala Mass Burial Case ಧರ್ಮಸ್ಥಳ ಸಮಾಧಿ ಪ್ರಕರಣ, ಸತ್ತ ವ್ಯಕ್ತಿಯ ತಂದೆಯನ್ನು ಸಂಪರ್ಕಿಸಿದ ಎಸ್ ಐ ಟಿ | Dharmasthala Mass Burial Case Human Skeleton Found Gow
ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ನಡೆದ ಶೋಧ ಕಾರ್ಯದಲ್ಲಿ ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಪತ್ತೆಯಾದ ಕಾರ್ಡ್ ಮಾಲೀಕರು ಜಾಂಡೀಸ್ ನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಆರನೇ ಗುಂಡಿಯಲ್ಲಿ ಪುರುಷನ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿದೆ. ಬೆಳ್ತಂಗಡಿ: ತಿಂಗಳಿಂದೀಚೆಗೆ ಸುದ್ದಿಗೆ ಗ್ರಾಸವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂತು ಸಮಾಧಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ. ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ವಿಶೇಷ ತನಿಖಾ ತಂಡ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮದ…