ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್
<p><strong>ರಟ್ಟೀಹಳ್ಳಿ (ಜುಲೈ.29):</strong> ಆ. 17ರಂದು ಇಲ್ಲಿನ ಪಟ್ಟಣ ಪಂಚಾಯಿತಿಯ ಪ್ರಥಮ ಚುನಾವಣೆ ನಡೆಯಲಿದ್ದು, ರಾಜ್ಯದ ಕುತೂಹಲ ಕೆರಳಿಸಿದೆ. ಪಪಂನ 15 ಸ್ಥಾನಗಳನ್ನೂ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾಸ ಬರೆಯಲಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.</p><p>ಸೋಮವಾರ ಪಟ್ಟಣದ ವೀರಭದ್ರೇಶ್ವರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರವು ಎಲ್ಲ ಸಮಾಜದ ಅಭಿವೃದ್ಧಿಗಾಗಿ ಯೋಜನೆಗಳನ್ನು ನೀಡುತ್ತಿದೆ….