ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ
ಹಾಸನ, ಜೂನ್ 23: ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಯುವ ಜನರು ಹೃದಯಾಘಾತದಿಂದ (Heart Attack) ಸಾವಿಗೀಡಾಗುತ್ತಿರುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಚೇತನ್ (38) ಊಟ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಇಹಲೋಕ ತ್ಯಜಿಸಿದ್ದಾರೆ. ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದ ನಿಶಾದ್ ನಿಶಾದ್ ಅಹ್ಮದ್…