Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಜೂನ್ 24: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆ(Rain)ಯಾಗಿರಲಿಲ್ಲ. ಈಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…