ಪ್ರೀತಿಸಿದ ಯುವತಿಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು
ದೇವನಹಳ್ಳಿ, ಜೂನ್ 23: ಪ್ರೀತಿಸಿದ ಯುವತಿಯಿಂದ (girl) ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ (boy) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್,…