Video Viral: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!
ಚಂಡೀಗ: ವೈದ್ಯಕೀಯ ವೃತ್ತಿ ಎಂದರೆ ಅದೊಂದು ಪವಿತ್ರ ಸೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳ ರೋಗಿಗಳನ್ನು ‘ಹಣ ಮಾಡುವ ಯಂತ್ರ’ಗಳಂತೆ ನೋಡುತ್ತಿದ್ದಾರೆ ಎಂಬ ಕಹಿಸತ್ಯ ಯುವ ವೈದ್ಯೆಯೊಬ್ಬರು ಧೈರ್ಯವಾಗಿ ಬಯಲಿಗೆಳೆದಿದ್ದಾರೆ. ಚಂಡೀಗಢದ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಈ ಘಟನೆ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸಆಗಿದೆ. ಏನಿದು ಘಟನೆ? ಯುವ ವೈದ್ಯೆ ಡಾ. ಪ್ರಬ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯರಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ ದಿನವೇ…