
ಗದಗ, ಜೂನ್ 27: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ (Bus) ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದಾಗಿ ಹಳೆಯ ಬಸ್‌ಗಳ ಬಳಕೆ ಮತ್ತು ಶಕ್ತಿ ಯೋಜನೆಯ ನಂತರ ಡಕೋಟಾ ಬಸ್‌ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹೊಸ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.