ನವದೆಹಲಿ, ಜೂನ್ 28: ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ “ಧರ್ಮ ಚಕ್ರವರ್ತಿ” ಬಿರುದು ಪ್ರದಾನ ಮಾಡಲಾಯಿತು. ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸಿದ ಪ್ರಧಾನಿ ಮೋದಿ, “ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ, ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ” ಎಂದಿದ್ದಾರೆ.
ದೆಹಲಿಯ ಭಗವಾನ್ ಮಹಾವೀರ ಅಹಿಂಸಾ ಭಾರತಿ ಟ್ರಸ್ಟ್ ಸಹಯೋಗದೊಂದಿಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿರುವ ಈ ಕಾರ್ಯಕ್ರಮ ಜೈನ ನಾಯಕನ ಆಧ್ಯಾತ್ಮಿಕ ಮತ್ತು ಪಾಂಡಿತ್ಯಪೂರ್ಣ ಪರಂಪರೆಯನ್ನು ಸ್ಮರಿಸುವ ಗುರಿಯನ್ನು ಹೊಂದಿವೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ