ತುಮಕೂರು: ಕುಣಿಗಲ್ ಬೈಪಾಸ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರ ಸಾವು

ತುಮಕೂರು: ಕುಣಿಗಲ್ ಬೈಪಾಸ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರ ಸಾವು


ತುಮಕೂರು, ಜೂನ್​ 29: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ​ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು ಎಂದು ತಿಳಿದುಬಂದಿದೆ. ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್​ ಡಿಕ್ಕಿಯಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಣಿಗಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ…



Source link

Leave a Reply

Your email address will not be published. Required fields are marked *