ಪರಮೇಶ್ವರ್ ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ, ಪವರ್ ಶೇರಿಂಗ್ ಚರ್ಚೆ ನಡೆದಿಲ್ಲ: ಡಿಕೆ ಶಿವಕುಮಾರ | Karnataka Politics Latest News | Asianet Suvarna News | Karnataka Dcm Dk Shivakumar Meets Home Minister Parameshwar Rav

ಪರಮೇಶ್ವರ್ ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ, ಪವರ್ ಶೇರಿಂಗ್ ಚರ್ಚೆ ನಡೆದಿಲ್ಲ: ಡಿಕೆ ಶಿವಕುಮಾರ | Karnataka Politics Latest News | Asianet Suvarna News | Karnataka Dcm Dk Shivakumar Meets Home Minister Parameshwar Rav



ಗೃಹ ಸಚಿವ ಪರಮೇಶ್ವರ್ ಅವರು ಮಧ್ಯರಾತ್ರಿ ಡಿಕೆಶಿ ಅವರನ್ನು ಭೇಟಿ ಮಾಡಿದ್ದು ನಿಜ. ಆದರೆ ಪವರ್ ಶೇರಿಂಗ್ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಸಣ್ಣ ಕೈಗಾರಿಕೆಗಳಿಗೆ ಪ್ರತ್ಯೇಕ ಸಚಿವಾಲಯ ರಚಿಸುವ ಬಗ್ಗೆಯೂ ಚರ್ಚಿಸಿದ್ದಾರೆ.

ದಾಬಸ್‍ಪೇಟೆ (ಜೂ.29): ಗೃಹ ಸಚಿವ ಪರಮೇಶ್ವರ್ ಅವರು ಮಧ್ಯರಾತ್ರಿ ವೇಳೆ ಬಂದು ನನ್ನನ್ನು ಭೇಟಿ ಮಾಡಿದ್ದು ನಿಜ. ಆದರೆ, ಅವರ ಜೊತೆ ಪವರ್ ಶೇರಿಂಗ್ ವಿಚಾರ ಕುರಿತು ಚರ್ಚೆ ನಡೆಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್ ನಮ್ಮ ಸರ್ಕಾರದ ಮಂತ್ರಿಗಳು, ಅವರನ್ನು ಭೇಟಿ ಮಾಡಿದ್ದು ನಿಜ. ಆದರೆ, ಬೇರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಇಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆ ಆಗಿಲ್ಲ. ಸರ್ಕಾರದಲ್ಲಿ ನಾವೆಲ್ಲರೂ ಸೇರಿ, ಒಟ್ಟಾಗಿ, ಶಿಸ್ತಿನಿಂದ ಕೆಲಸ ಮಾಡಬೇಕು. ಇದರ ಹೊರತಾಗಿ ಬೇರೆ ಯಾವುದೇ ವಿಚಾರ ಮಾತನಾಡಿಲ್ಲ ಎಂದು ಹೇಳಿದರು.

ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೆಐಎಡಿಬಿ ವತಿಯಿಂದ ಶೇ.20ರಷ್ಟು ಅನುದಾನವನ್ನು ಸಣ್ಣ ಕೈಗಾರಿಕೆಗಳಿಗೆ ನೀಡಬೇಕು ಎಂಬ ಕಾನೂನಿದ್ದು, ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರ ಬಳಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಸಣ್ಣ ಕೈಗಾರಿಕೆಗಳಿಗೆ ನಾವು ಒತ್ತು ನೀಡಬೇಕು ಎಂದು ಇದೇ ವೇಳೆ ಅವರು ತಿಳಿಸಿದರು.



Source link

Leave a Reply

Your email address will not be published. Required fields are marked *