ಬೆಳಗಾವಿಯಲ್ಲಿ ಗೋ ರಕ್ಷಕರ ಮೇಲೆ ಹಲ್ಲೆ: ಉಗ್ರ ಹೋರಾಟ ಎಚ್ಚರಿಕೆ ನೀಡಿದ ಶ್ರೀರಾಮ ಸೇನೆ

ಬೆಳಗಾವಿಯಲ್ಲಿ ಗೋ ರಕ್ಷಕರ ಮೇಲೆ ಹಲ್ಲೆ: ಉಗ್ರ ಹೋರಾಟ ಎಚ್ಚರಿಕೆ ನೀಡಿದ ಶ್ರೀರಾಮ ಸೇನೆ


ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ

ಬೆಳಗಾವಿ, ಜೂನ್​ 29: ಶ್ರೀರಾಮ ಸೇನೆ (Sri Ram Sene) ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಇಂಗಳಿಯಲ್ಲಿ ನಡೆದಿದೆ. ಗೋವುಗಳ ರಕ್ಷಣೆ ಮಾಡಿದ್ದ ಐವರು ಹಿಂದೂ ಕಾರ್ಯಕರ್ತರನ್ನು ಮೇಲೆ ಹಲ್ಲೆ ಮಾಡಲಾಗಿದೆ. ಆರೋಪಿಗಳನ್ನು ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಶ್ರೀರಾಮ ಸೇನೆ ಸಂಘಟನೆ ಎಚ್ಚರಿಕೆ ನೀಡಿದೆ. ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಐವರು ಶ್ರೀರಾಮ ಸೇನೆ ಕಾರ್ಯಕರ್ತರು ಮೊನ್ನೆಯಷ್ಟೇ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದ್ದರು. ಗೋವುಗಳ ರಕ್ಷಣೆ ಮಾಡಿದವರು ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾರೆ. ಇಂಗಳಿ ಗ್ರಾಮದ ಯುವಕರ ಗುಂಪು ಶ್ರೀರಾಮ ಸೇನೆ ಸಂಘಟನೆಯ ಐದು ಜನ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಗ್ರಾಮದ 20 ಕ್ಕೂ ಅಧಿಕ ಜನರ ಗುಂಪು ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ‌ ನೀರು ಕುಡಿಸಿ ಕಟ್ಟಿಗೆ ಮತ್ತು ಕೈಯಿಂದ ಹಲ್ಲೆ ಮಾಡಿದೆ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವುದನ್ನು ಅದೇ ಗ್ರಾಮದ ಯುವಕನೋರ್ವ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡದಿದ್ದಾರೆ. ಸದ್ಯ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ

ಕಳೆದ ಎರಡು ದಿನಗಳ ಹಿಂದೆಯಷ್ಟೇ ಈ ಹಿಂದೂ ಕಾರ್ಯಕರ್ತರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಿದ್ದರು. ನಂತರ ಆ ಗೋವುಗಳನ್ನು ಇಂಗಳಿ ಗ್ರಾಮದ ಗೋ ಶಾಲೆಗೆ ರವಾನಿಸಿದ್ದರು. ಶನಿವಾರ ಮತ್ತೆ ಗೋವುಗಳನ್ನು ತೆಗೆದುಕೊಂಡು ಹೋಗುವ ವಿಚಾರ ಕಾರ್ಯಕರ್ತರಿಗೆ ಗೊತ್ತಾಗಿದೆ. ತಕ್ಷಣವೇ ಅದನ್ನು ತಡೆಯಲು ಗ್ರಾಮಕ್ಕೆ ಬಂದು ಪ್ರಶ್ನೆ ಮಾಡಿದ್ದಾರೆ.

ಪ್ರಶ್ನೆ ಮಾಡಿದ್ದೇ ತಡ ಗೋವು ಸಾಗಾಟ ಮಾಡುವ ಗುಂಪು, ಹಿಂದೂ ಕಾರ್ಯಕರ್ತರ ಮೇಲೆ ನೈತಿಕ ಪೊಲೀಸಗಿರಿ ನಡೆಸುವ ಮೂಲಕ ಗೂಂಡಾಗಿರಿ ಪ್ರದರ್ಶನ ಮಾಡಿದೆ. ಈ ಘಟನೆಯನ್ನ ಶ್ರೀರಾಮ ಸೇನೆ ಸಂಘಟನೆ ಬಲವಾಗಿ ಖಂಡಿಸಿದೆ. ಗೋವುಗಳ ರಕ್ಷಣೆ ಮಾಡಲು ಹೋದವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಮರಕ್ಕೆ ಕಟ್ಟಿ ನೀರು ಕುಡಿಸಿ ಹೊಡೆದಿದ್ದಾರೆ. ಅತ್ಯಾಚಾರ ಮಾಡಿದ್ದೀರಿ ಅಂತ ಹೇಳಿ ಹಲ್ಲೆ ಮಾಡಿದ್ದಾರೆ. ಮತ್ತೆ ಕೆಲವರು ಪೊಲೀಸ್ ಠಾಣೆಯಲ್ಲಿ ಧಮ್ಕಿ ಹಾಕುತ್ತಿದ್ದಾರೆ. ತಕ್ಷಣವೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಬೆಳಗಾವಿಯಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟಿದೆ.

ಇದನ್ನೂ ಓದಿ: ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್

ಘಟನೆಯನ್ನು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಖಂಡಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೇ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯಮಕನಮರಡಿ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

ಎಸ್​ಪಿ ಸ್ಪಷ್ಟನೆ

ಘಟನೆ ಕುರಿತು ಎಸ್‌ಪಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ ನೀಡಿದ್ದು, ಘಟನೆಯಾದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಯಾವುದೇ ಹಲ್ಲೆಯಾಗಿಲ್ಲ ಅಂತ ಗೋವು ರಕ್ಷರು ಬರೆದು ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ



Source link

Leave a Reply

Your email address will not be published. Required fields are marked *