ಬರ್ಮಿಂಗ್‌ಹ್ಯಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟವಾಗಿದ್ದು, ಮಾರಕ ವೇಗಿ ಜೋಫ್ರಾ ಆರ್ಚರ್ ತಂಡ ಕೂಡಿಕೊಂಡಿದ್ದಾರೆ. ಆದರೆ ಆರ್ಚರ್ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಭಾರತ ವಿರುದ್ಧ 2ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟಗೊಂಡಿದ್ದು, ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಮರಳಿದ್ದಾರೆ.

ಮೊಣಕೈ ಗಾಯದಿಂದಾಗಿ ಕಳೆದ 4 ವರ್ಷಗಳಲ್ಲಿ ಹಲವು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಆರ್ಚರ್, ಕೊನೆ ಬಾರಿಗೆ ಟೆಸ್ಟ್ ಆಡಿದ್ದು 2021ರ ಫೆಬ್ರವರಿಯಲ್ಲಿ.

ಭಾರತ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಅವರು ಕೊನೆಯ ಬಾರಿಗೆ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ 4 ವರ್ಷ ಬಳಿಕ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ.

ಜೋಫ್ರಾ ಆರ್ಚರ್ ಇಂಗ್ಲೆಂಡ್ ಪರ 13 ಟೆಸ್ಟ್ ಪಂದ್ಯಗಳನ್ನಾಡಿ 31ರ ಸರಾಸರಿಯಲ್ಲಿ 42 ವಿಕೆಟ್ ಕಬಳಿಸಿದ್ದಾರೆ. ಆರ್ಚರ್ ಸೇರ್ಪಡೆ ಇಂಗ್ಲೆಂಡ್ ಪಾಳಯದಲ್ಲಿ ಹೊಸ ಹುರುಪು ತಂದುಕೊಟ್ಟಿದೆ.

ಇನ್ನು ಆರ್ಚರ್ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ಕ್ರಿಕೆಟ್ ಮ್ಯಾನೇಜಿಂಗ್ ಡೈರೆಕ್ಟರ್ ರಾಬ್ ಕೀ, ಅವರು ಎರಡನೇ ಟೆಸ್ಟ್‌ಗೂ ಮುನ್ನ ಸಂಪೂರ್ಣ ಫಿಟ್ ಅಗಿರಲಿದ್ದಾರೆ. ಆದರೆ ಎರಡೂ ಪಂದ್ಯಗಳನ್ನು ಆಡುತ್ತಾರೆಯೇ ಎನ್ನುವುದಕ್ಕೆ ಈಗಲೇ ಉತ್ತರವಿಲ್ಲ. ಒಂದು ಪಂದ್ಯವನ್ನಂತೂ ಖಂಡಿತ ಆಡುತ್ತಾರೆ ಎಂದು ಹೇಳಿದ್ದಾರೆ.

ಉಳಿದಂತೆ ಮೊದಲ ಟೆಸ್ಟ್‌ಗೆ ಆಯ್ಕೆಯಾಗಿದ್ದ ಆಟಗಾರರನ್ನು 2ನೇ ಟೆಸ್ಟ್‌ಗೂ ಮುಂದುವರಿಸಲು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯವು ಜುಲೈ 02ರಿಂದ ಏಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿದೆ.

Source link
ಭಾರತ ಎದುರಿನ ಎರಡನೇ ಟೆಸ್ಟ್‌ಗೆ ಮಾರಕ ವೇಗಿ ಇಂಗ್ಲೆಂಡ್ ಸೇರ್ಪಡೆ, ಆದ್ರೆ ಆಡೋದೇ ಡೌಟ್!