ಬೆಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗುತ್ತಿದೆ..)
Published On – 6:03 pm, Mon, 23 June 25