ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San



ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತಕ್ಕೀಡಾಗಿದ್ದು, ಓವರ್‌ಟೇಕ್ ವಿಚಾರದಲ್ಲಿ ಗಲಾಟೆ ನಡೆದಿದೆ. ಹೆಗಡೆ ಅವರ ಗನ್‌ಮ್ಯಾನ್ ಮತ್ತು ಚಾಲಕ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನೆಲಮಂಗಲದಲ್ಲಿ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು (ಜೂ.23): ಉತ್ತರ ಕನ್ನಡ ಜಿಲ್ಲೆಯ ಮಾಜಿ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತಕ್ಕೆ ಈಡಾಗಿದೆ. ಕಾರವಾರದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿ ನೆಲಮಂಗಲದ ನಿಜಗಲ್‌ ತಾಲೂಕಿನಲ್ಲಿ ಘಟನೆ ನಡೆದಿದೆ. ಕಾರು ಓವರ್‌ಟೇಕ್‌ ಬೆನ್ನಲ್ಲಿಯೇ ಅಪಘಾತ ಸಂಭವಿಸಿದ್ದು, ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಅನಂತ್‌ ಕುಮಾರ್‌ ಅವರ ಗನ್‌ಮ್ಯಾನ್‌ ಹಾಗೂ ಡ್ರೈವರ್‌ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಮಾಜಿ ಸಂಸದ ಹಾಗೂ ಬೆಂಬಲಿಗರಿಂದ ಗೂಂಡಾಗಿರಿ ಆರೋಪ ಮಾಡಲಾಗಿದ್ದು, ಕಾರು ಓವರ್ ಟೇಕ್ ವಿಚಾರದಲ್ಲಿ ಗಲಾಟೆ ನಡೆದಿದೆ. ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ ನಡೆದಿದೆ.

ಇನೋವಾ ಕಾರು ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರನ್ನ ಓವರ್ ಟ್ಯಾಂಕ್ ಮಾಡಿದ ವಿಚಾರದಲ್ಲಿ ಗಲಾಟೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಇದಕ್ಕಾಗಿ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ದಾಬಸ್ ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ನೆಲಮಂಗಲ ಡಿವೈಎಸ್ ಪಿ ಕಚೇರಿಗೆ ಆಗಮಿಸಿದ ಅನಂತ್ ಕುಮಾರ್ ಹೆಗಡೆ ಆಗಮಿಸಿದ್ದು, ಅವರ ವಿಚಾರಣೆ ನಡೆಯುತ್ತಿದೆ.

ನೆಲಮಂಗಲ ಗ್ರಾಮಾಂತರ ಠಾಣಾ ಡಿವೈಎಸ್ಪಿ ಕಛೇರಿಯಲ್ಲಿ ಡಿವೈಎಸ್ಪಿ ಜಗದೀಶ್ ಅನಂತ್‌ ಕುಮಾರ್‌ ಹೆಗಡೆ ವಿಚಾರಣೆ ನಡೆಸಿದ್ದಾರೆ.ಈ ವೇಳೆ ಕಾರವಾರದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗಿ ಮಾಹಿತಿ ನೀಡಿದ್ದು, ಬರುವಾಗ ಹಿಂದಿನಿಂದ ಬಂದ ಇನ್ನೊವಾ ಕಾರು ಓವರ್ ಟೇಕ್ ಮಾಡಿದ್ದ. ಓವರ್ ಟೇಕ್ ಕಾರಿಗೆ ಟಚ್ ಆಗುವ ಸಂದರ್ಭದಲ್ಲಿ ಡ್ರೈವರ್‌ ಇದರ ಬಗ್ಗೆ ಕೇಳಿದ್ದಾನೆ. ಅವರೂ ಕೂಡಾ ಬೈದಿದ್ದಾರೆ. ಈ ಹಂತದಲ್ಲಿ ಮಾತಿಗೆ ಮಾತು ಬೆಳೆದಿದೆ ಎಂದು ಅನಂತ್‌ ಕುಮಾರ್‌ ಹೇಳಿದ್ದಾರೆ.

ಘಟನೆ ಸಂಬಂಧ ಹಲ್ಲೆ ಮಾಡಿರೋರಾಗಿ ಒಪ್ಪಿಕೊಂಡಿರುವ ಡ್ರೈವರ್ ಹಾಗೂ ಗನ್ ಮ್ಯಾನ್. ಅನಂತ ಕುಮಾರ್ ಹೆಗಡೆ ನಾನು ಕಾರಿನಲ್ಲೆ ಇದ್ದೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಅನ್ವಯ ಪ್ರಕರಣ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

 



Source link

Leave a Reply

Your email address will not be published. Required fields are marked *