ರಾಮನಗರ, (ಜೂನ್ 22): ಕರ್ನಾಟಕದಲ್ಲಿ ಮತ್ತೆ ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಮುನ್ನಲೆಗೆ ಬಂದಿದೆ. ಇನ್ನುಳಿದ ಎರಡುವರೆ ವರ್ಷ ಕಾಲ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರನ್ನೆ ಮುಂದುವರಿಸಬೇಕೆಂದು ಇವರ ಬೆಂಬಲಿಗರು ಒತ್ತಾಸೆಯಾಗಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ
ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.
ರಾಮನಗರದಲ್ಲಿಂದು ಮಾತನಾಡಿರುವ ಇಕ್ಬಾಲ್ ಹುಸೇನ್ ,ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ರು. ಹಾಗೇ ಗ್ಯಾರಂಟಿ ಯೋಜನೆಗಳು ಕೊಡಲು ಸಾಧ್ಯವಿಲ್ಲ ಅಂತಾ ಹೇಳಿದ್ದರು. ಆದ್ರೆ, ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಮುಂದಿನ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ 140 ಸೀಟ್ ಗಳು ಗೆದ್ದು ಸರ್ಕಾರ ರಚಿಸುತ್ತೇವೆ. ಮಾದಪ್ಪನಾಣೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.