Headlines

ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ, ಪ್ರೀತಿ ಹೆಸರಲ್ಲಿ ಮೋಸ

ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ, ಪ್ರೀತಿ ಹೆಸರಲ್ಲಿ ಮೋಸ


ಮಂಗಳೂರು, (ಜೂನ್ 26): ಪುತ್ತೂರಿನ (Puttur) ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎನ್ನುವರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಆರೋಪಿ ಕೃಷ್ಣ, ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಸಂಬಂಧ ಇದೀಗ ಯುವತಿ, ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡಿರುವ ಪೊಲೀಸರು ಶ್ರೀಕೃಷ್ಣನ ಪತ್ತೆಗೆ ಬಲೆ ಬೀಸಿದ್ದಾರೆ.

ಮಂಗಳೂರಿನ ಖಾಸಗಿ ಕಾಲೇಜಿನ Bsc ವ್ಯಾಸಂಗ ಮಾಡುತ್ತಿರುವ ಯುವತಿ ಹಾಗೂ ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ಓದುವಾಗ ಪರಸ್ಪರ ಲವ್ ಮಾಡುತ್ತಿದ್ದರು. ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆ 2024ರ ಅಕ್ಟೋಬರ್‌ 11ರಂದು ಶ್ರೀಕೃಷ್ಣ ಮನೆಗೆ ಕರೆದು ಮದುವೆಯಾಗುತ್ತೇನೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಲ್ಲದೇ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾದ ವಿಚಾರ ತಿಳಿದು ಕೃಷ್ಣ ಮದುವೆಗೆ ನಿರಾಕರಣೆ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಈತನಿಂದ ವಂಚನೆಗೆ ಒಳಗಾದ ಯುವತಿಯೂ ಪುತ್ತೂರಿನ ನಿವಾಸಿಯಾಗಿದ್ದು, ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿಯನ್ನು ಮನೆಗೆ ಕರೆತಂದು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದಾನೆ. ಸದ್ಯ ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಯುವತಿ ದೂರಿನಲ್ಲೇನಿದೆ?

ದೂರಿನಲ್ಲಿ ತಿಳಿಸಿರುವಂತೆ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ರಾವ್, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಯತ್ನಿಸಿದ್ದ. ಯುವತಿ ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ ಹಾಗೂ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದ. ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಮನೆಗೆ ಕರೆಸಿ ಕೊಂಡು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದರಿಂದಾಗಿ ಗರ್ಭವತಿಯಾಗಿದ್ದು, ಈಗ ಒಂಬತ್ತು ತಿಂಗಳ ಗರ್ಭಿಣಿ. ಈ ವಿಚಾರವನ್ನು ತನ್ನ ತಂದೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದಾಗ ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದರು. ಆದರೆ, ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಸದ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ .

Published On – 8:06 pm, Thu, 26 June 25



Source link

Leave a Reply

Your email address will not be published. Required fields are marked *