ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ


ಲಖೀಂಪುರ ಖೇರಿ, ಜೂನ್ 24: ಉತ್ತರ ಪ್ರದೇಶದ (Uttar Pradesh) ಲಖಿಂಪುರ ಖೇರಿಯ ಧೌರ್ಪುರ್ ಅರಣ್ಯ ಪ್ರದೇಶದ ಜುಗ್ನುಪುರ್ ಪ್ರದೇಶದ ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ಮಾಡಿತು. ಈ ವೇಳೆ ಯುವಕನೊಬ್ಬ ಚಿರತೆಯನ್ನು ಕೆಡವಿ ಅದರ ಜೊತೆ ಸೆಣಸಾಡಿದ್ದಾನೆ. ಈ ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಕಪ್ಪು ಚಿರತೆಯ (Black Leopard) ಮೇಲೆ ಇಟ್ಟಿಗೆಗಳು ಮತ್ತು ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಈ ಘಟನೆಯ ವಿಡಿಯೋದಲ್ಲಿ ಕಪ್ಪು ಚಿರತೆ ಯುವಕನ ಹಿಡಿತದಿಂದ ಬಿಡಿಸಿಕೊಳ್ಳಲು ಹೆಣಗಾಡುತ್ತಿರುವುದನ್ನು ನೋಡಬಹುದು. ಗ್ರಾಮಸ್ಥರು ಆ ಚಿರತೆಯ ಮೇಲೆ ಇಟ್ಟಿಗೆಗಳನ್ನು ಎಸೆಯುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 



Source link

Leave a Reply

Your email address will not be published. Required fields are marked *