ಅಂದರೆ ಗೌತಮ್ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡವು 7 ಪಂದ್ಯಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಇನ್ನು 1 ಪಂದ್ಯವು ಡ್ರಾನಲ್ಲಿ ಕೊನೆಗೊಂಡರೆ, 3 ಪಂದ್ಯಗಳಲ್ಲಿ ಮಾತ್ರ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಹೀಗೆ ಗೆಲುವು ದಾಖಲಿಸಿರುವುದು ಬಾಂಗ್ಲಾದೇಶ್ ವಿರುದ್ಧ ಎಂಬುದು ಇಲ್ಲಿ ಉಲ್ಲೇಖಾರ್ಹ. ಬಾಂಗ್ಲಾ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಗೆದ್ದರೆ, ಒಂದು ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಈ ಮೂರು ಗೆಲುವನ್ನು ಹೊರತುಪಡಿಸಿದರೆ ಟೀಮ್ ಇಂಡಿಯಾ ಸತತ ಸೋಲುಗಳಿಂದ ಕಂಗೆಟ್ಟಿರುವುದು ಸ್ಪಷ್ಟ.