ನವಂಬರ್, (ನವೆಂಬರ್ 10): ದೆಹಲಿಯ ಕೆಂಪುಕೋಟೆ ಬಳಿ ಕಾರಿನಲ್ಲಿ ಇಂದು ಸಂಜೆ ಸ್ಪೋಟ ಸಂಭವಿಸಿದೆ. ಸ್ಪೋಟದಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ. 24ಕ್ಕೂ ಹೆಚ್ಚು ಮಂದಿ ಇದ್ದಾರೆ.ಈ ಸ್ಫೋಟದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರಗೊಂಡು ರಸ್ತೆ ತುಂಬೆಲ್ಲಾ ಬಿದ್ದಿವೆ. ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಾಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್ಜಿ ತನಿಖೆ ನಡೆಸುತ್ತಿದ್ದು, ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲಿಸಿದ್ದು, ಸದ್ಯದ ಮಾಹಿತಿ ಪ್ರಕಾರ ಶಂಕಿತನನ್ನು ಬಂಧಿಸಲಾಗಿದೆ.
ಸ್ಫೋಟದ ಸಂಬಂಧ ದೆಹಲಿ ಪೊಲೀಸ್ ಕಮಿಷನರ್ ಸತೀಶ್ ಗೋಲ್ಚಾ ಮಾತನಾಡಿದ್ದು, ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿಯ ಸಿಗ್ನಲ್ನಲ್ಲಿ ಕಾರು ನಿಧಾನವಾಗಿ ಚಲಿಸುತ್ತಿದ್ದಾಗ ಸ್ಫೋಟಗೊಂಡು, ಕಾರಿನಲ್ಲಿದ್ದವರು ನಗರದಲ್ಲಿ ಇರುವ ಸಾಧ್ಯತೆಯಿದೆ. ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್ಜಿ ತನಿಖೆ ನಡೆಸುತ್ತಿದೆ. ಸ್ಫೋಟದಲ್ಲಿ ವಿಫಲವಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಸದ್ಯ ಶಂಕಿತನನ್ನು ಬಂಧಿಸಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತ ವಿಚಾರಣೆ ವೇಳೆ ತಿಳಿಸಿದ ಮಾಹಿತಿ ಸ್ಫೋಟಕ ಕಾರಣ ಗೊತ್ತಾಗಲಿದೆ.