ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (ಖಾತರಿ ಯೋಜನೆ) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದರೆ, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದರೆ, ಸತ್ತವರ ಅಕೌಂಟ್‌ಗೆ (ಬ್ಯಾಂಕ್ ಖಾತೆ) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಈ ಯೋಜನೆ ಈಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ.
ಬರೋಬ್ಬರಿ 69 ಸಾವಿರ ಸತ್ತವರ ಬ್ಯಾಂಕ್ ಖಾತೆಗಳಿಗೆ 79 ಕೋಟಿ ರೂ. ಗೃಹಲಕ್ಷ್ಮಿ ಹಣ ಪಾವತಿ ಆಗಿರುವುದನ್ನು ಸರ್ಕಾರ ಪತ್ತೆ ಮಾಡಿದ್ದು, ಈ ಹಣವನ್ನು ಇದೀಗ ಪಡೆದುಕೊಳ್ಳಲು ಸರ್ಕಾರ, ಬ್ಯಾಂಕ್ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಿದೆ.