ಪುಣೆ, ನವೆಂಬರ್ 13: ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 8 ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ನಂತರ 2ರಿಂದ 3 ಭಾರೀ ವಾಹನಗಳು ಬೆಂಕಿಗೆ (ಅಗ್ನಿ ಅಪಘಾತ) ಆಹುತಿಯಾಗಿವೆ.
ಎರಡು ಟ್ರಕ್ಗಳು ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಆ ಎರಡು ವಾಹನಗಳು ಬೆಂಕಿಗೆ ಆಹುತಿಯಾಗುವ ಮೊದಲು ಕಾರು ಅವುಗಳ ನಡುವೆ ಸಿಲುಕಿಕೊಂಡಿತು. ಅಗ್ನಿಶಾಮಕ ದಳದ ಸ್ಥಳಕ್ಕೆ ಧಾವಿಸಿ ಹಲವಾರು ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ಯಶಸ್ವಿಯಾದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ