Headlines

ಅಧಿಕಾರದಲ್ಲಿ 8931 ದಿನಗಳು: ಮತ್ತೊಂದು ದಾಖಲೆ ಬರೆದು ಹಲವು ದಾಖಲೆಗಳ ಸರದಾರನೆನಿಸಿದ ನಮೋ

ಅಧಿಕಾರದಲ್ಲಿ 8931 ದಿನಗಳು: ಮತ್ತೊಂದು ದಾಖಲೆ ಬರೆದು ಹಲವು ದಾಖಲೆಗಳ ಸರದಾರನೆನಿಸಿದ ನಮೋ

ಅಧಿಕಾರದಲ್ಲಿ 8931 ದಿನಗಳು: ಮತ್ತೊಂದು ದಾಖಲೆ ಬರೆದು ಹಲವು ದಾಖಲೆಗಳ ಸರದಾರನೆನಿಸಿದ ನಮೋ

Narendra modi record list: ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಒಟ್ಟು 8931 ದಿನಗಳ ಕಾಲ ಅಧಿಕಾರದಲ್ಲಿದ್ದು, ಭಾರತದ ಅತೀ ಸುದೀರ್ಘಾವಧಿ ಸೇವೆ ಸಲ್ಲಿಸಿದ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಈ ಮೂಲಕ ಸಿಕ್ಕಿಂನ ಮಾಜಿ ಸಿಎಂ ಪವನ್‌ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

2001ರಿಂದ 2014ರವರೆಗೆ ಗುಜರಾತ್ ಸಿಎಂ ಆಗಿ ಕಾರ್ಯನಿರ್ವಹಿಸುವ ಮೂಲಕ ಗುಜರಾತ್‌ನಲ್ಲಿ ಅತೀ ಸುದೀರ್ಘಾವಧಿ ಸೇವೆ ಸಲ್ಲಿಸಿದ್ದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ನರೇಂದ್ರ ಮೋದಿಯವರು ಈಗ 8931 ದಿನಗಳ ಕಾಲ ಅಧಿಕಾರದಲ್ಲಿದ್ದು ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ಅತೀ ಅಧಿಕಾರದಲ್ಲಿದ್ದ ಸರ್ಕಾರದ ಅತೀ ಸುದೀರ್ಘಾವಧಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಅವರು ಸಿಕ್ಕಿಂನ ಮುಖ್ಯಮಂತ್ರಿಯಾಗಿ 8930 ದಿನಗಳ ಕಾಲ ಸೇವೆ ಸಲ್ಲಿಸಿದ್ದ ಪವನ್‌ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಹೌದು ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದ ಅತ್ಯಂತ ದೀರ್ಘಾವಧಿಯ ಮುಖ್ಯಸ್ಥರಾಗುವ ಮೂಲಕ ಭಾರತೀಯ ರಾಜಕೀಯದಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯನ್ನು ಕೂಡ ಸೇರಿಸಿದರೆ ಅವರ ನಾಯಕತ್ವಕ್ಕೆ ಬರೋಬ್ಬರಿ 24 ವರ್ಷಗಳು ತುಂಬಿ 25ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಇದೊಂದು ಅಪರೂಪದ ಸಾಧನೆಯಾಗಿದ್ದು, ಪ್ರಧಾನಿಯವರದಶಕಗಳ ನಿರಂತರ ಸಾರ್ವಜನಿಕ ಸೇವೆ ಮತ್ತು ಉನ್ನತ ಮಟ್ಟದಲ್ಲಿ ರಾಜಕೀಯ ನಾಯಕತ್ವವನ್ನು ಪ್ರತಿಬಿಂಬಿಸಿದೆ.

ತಮ್ಮ ಅಧಿಕಾರಾವಧಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಹಲವಾರು ಗಮನಾರ್ಹ ದಾಖಲೆಗಳನ್ನು ಮಾಡಿದ್ದಾರೆ. ಅವುಗಳಲ್ಲಿ ಗುಜರಾತ್‌ನ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿಎಂ ಹಾಗೂ ಮುಖ್ಯಮಂತ್ರಿಯಾಗಿ ದೀರ್ಘಾವಧಿಯ ಹಿಂದಿನ ಅನುಭವ ಹೊಂದಿರುವ ಪ್ರಧಾನಿ ಎಂಬ ಹೆಗ್ಗಳಿಕೆಯೂ ಸೇರಿದೆ. ಇದರ ಜೊತೆಗೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಜನಿಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ ಮತ್ತು 2014, 2019 ಮತ್ತು 2024 ರಲ್ಲಿ ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಅವರು ಜಯಗಳಿಸಿದ್ದಾರೆ.

ನರೇಂದ್ರ ಮೋದಿ ಅವರು ಅಕ್ಟೋಬರ್ 7, 2001 ರಂದು ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು ಮತ್ತು ಮೇ 21, 2014 ರವರೆಗೂ ಆ ಹುದ್ದೆಯಲ್ಲಿ ಮುಂದುವರೆದಿದ್ದರು. ರಾಷ್ಟ್ರ ರಾಜಕಾರಣಕ್ಕೆ ತೆರಳುವ ಮೊದಲು 13 ವರ್ಷಗಳಿಗೂ ಹೆಚ್ಚು ಕಾಲ ಅವರು ಗುಜರಾತ್ ರಾಜ್ಯವನ್ನು ಸಿಎಂ ಆಗಿ ಮುನ್ನಡೆಸಿದರು.

ಇದಾದ ನಂತರ ಮೇ 26, 2014 ರಂದು ಭಾರತದ 14 ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಲೋಕಸಭೆಯಲ್ಲಿ ಪೂರ್ಣ ಬಹುಮತ ಪಡೆದ ಮೊದಲ ಕಾಂಗ್ರೆಸ್ಸೇತರ ಸರ್ಕಾರದ ನಾಯಕರಾದರು. ಸರ್ಕಾರದ ಎರಡುಅವಧಿಗಳನ್ನು ಪೂರ್ಣಗೊಳಿಸಿದ ಮತ್ತು ಸತತ ಮೂರನೇ ಅವಧಿಗೆ ಮರಳಿದ ಭಾರತದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ.

ಈ ಮೈಲಿಗಲ್ಲಿನ ಜೊತೆಗೆ, ಪ್ರಧಾನಿ ಮೋದಿ ಈ ವರ್ಷ ಹಲವಾರು ಇತರ ಮಹತ್ವದ ಮೈಲಿಗಲ್ಲುಗಳನ್ನು ದಾಟಿ ಬಂದಿದ್ದಾರೆ. ಅದು ವಿಶೇಷವಾಗಿ ಡಿಜಿಟಲ್ ಕ್ಷೇತ್ರದಲ್ಲಿ.

ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ 30 ಮಿಲಿಯನ್ ಫಾಲೋವರ್ಸ್‌ಗಳನ್ನು ಗಳಿಸಿದ್ದಾರೆ. ತಲುಪಿದರು, ಯೂಟ್ಯೂಬ್‌ನಲ್ಲಿ ಅತೀ ಹೆಚ್ಚು ಜನ ಫಾಲೋ ಮಾಡುವ ಜಾಗತಿಕ ನಾಯಕರಲ್ಲಿ ಪ್ರಧಾನಿ ಕೂಡ ಒಬ್ಬರು. ಹಾಗೆಯೇ ಇತರ ಪ್ರಮುಖ ಅಂತರರಾಷ್ಟ್ರೀಯ ರಾಜಕೀಯ ವ್ಯಕ್ತಿಗಳಿ ಹೋಲಿಸಿದರೆ ನಮ್ಮ ಪ್ರಧಾನಿಯೇ ಮುಂದಿದ್ದಾರೆ.

ಫೆಬ್ರವರಿಯಲ್ಲಿ, ಪ್ರಧಾನಿ ಮೋದಿ ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ಗಳಿಸಿದ್ದರು. ಇನ್ಸ್ಟಾಗ್ರಾಮ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. 2014 ರಲ್ಲಿ ಅವರು ಇನ್‌ಸ್ಟಾಗ್ರಾಮ್‌ಗೆ ಸೇರಿದಾಗಿನಿಂದ, ಅವರ ಉಪಸ್ಥಿತಿಯು ಜಾಗತಿಕ ನಾಯಕರಲ್ಲಿ ಅತ್ಯಂತ ಸಕ್ರಿಯವಾಗಿರುವ ಮತ್ತು ವ್ಯಾಪಕವಾಗಿ ಫಾಲೋ ಮಾಡಲ್ಪಡುವ ಖಾತೆಗಳಲ್ಲಿ ಒಂದಾಗಿ ಸ್ಥಿರವಾಗಿ ಬೆಳೆದಿದೆ. ಈಗ ಅವರ ಫಾಲೋವರ್ಸ್‌ಗಳ ಸಂಖ್ಯೆ 101 ಮಿಲಿಯನ್ ಹಾಗೆಯೇ ಎಕ್ಸ್‌ನಲ್ಲಿ ಪ್ರಧಾನಿ ಮೋದಿಯವರಿಗೆ 106.4 ಜನ ಫಾಲೋವರ್ಸ್‌ಗಳಿದ್ದಾರೆ.

Source link

Leave a Reply

Your email address will not be published. Required fields are marked *