ಉಡುಪಿ, ಡಿಸೆಂಬರ್ 29: ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಕ್ಯಾಂಟರ್ ನಡುವೆ ಮೊದಲು ಡಿಕ್ಕಿ ಆಸ್ಪತ್ರೆ, ಅಪಘಾತದ ರಭಸಕ್ಕೆ ಕ್ಯಾಂಟರ್ ಪಲ್ಟಿಯಾಗಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಾರು ಕೂಡ ಜಖಂ ಆಗಿದೆ. ಕ್ಯಾಂಟರ್ ದಾವಣಗೆರೆಯಿಂದ ಮಂಗಳೂರಿಗೆ ಮೊಟ್ಟೆ ಸಾಗಿಸುತ್ತಿತ್ತು, ಕಾರು ಬೆಳ್ಮಣ್ಣಿನಿಂದ ಕಾರ್ಕಳದ ಕಡೆಗೆ ಬರುತ್ತಿತ್ತು. ಅಪಘಾತದಲ್ಲಿ ಪಾದಚಾರಿ ಗಂಭೀರವಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.