ಬಿಗ್ ಬಾಸ್ (ಬಿಗ್ ಬಾಸ್ ಕನ್ನಡ ಸೀಸನ್ 12) ಮನೆಯಲ್ಲಿ ಈಗ ಕೆಲವೇ ಮಂದಿ ಇದ್ದಾರೆ. ಫಿನಾಲೆ ಹತ್ತಿರವಾಗುತ್ತಿದ್ದಂತೆಯೇ ಪೈಪೋಟಿ ಜೋರಾಗಿದೆ. ಈ ವಾರ ಯಾರೆಲ್ಲ ನಾಮಿನೇಟ್ ಆಗುತ್ತಾರೆ ಎಂದು ತಿಳಿಯುವ ಕೌತುಕ ಮೂಡಿದೆ. ಸೋಮವಾರ (ಡಿಸೆಂಬರ್ 29) ನಾಮನಿರ್ದೇಶನ ಪ್ರಕ್ರಿಯೆ ನಡೆದಿದೆ. ಕ್ಯಾಪ್ಟನ್ ಗಿಲ್ಲಿ ಅವರು ಮುಖ್ಯ ಪಾತ್ರವನ್ನು ವಹಿಸಿದ್ದಾರೆ. ನಾಮಿನೇಷನ್ ವೇಳೆ ಪ್ರತಿ ಬಾರಿಯೂ ಕಿರಿಕ್ ಇದ್ದೇ ಇರುತ್ತದೆ. ಈ ಬಾರಿ ಕೂಡ ಮುಂದುವರಿದಿದೆ. ಕಾವ್ಯ ಪರವಾಗಿ ಗಿಲ್ಲಿ ನಿಂತಿದ್ದಕ್ಕೆ ಅಶ್ವಿನಿ ಗೌಡ ಅವರು ಗರಂ ಆಗಿದ್ದಾರೆ. ಈ ವಾರ ಯಾರು ಔಟ್ ಆಗುತ್ತಾರೆ? ಫಿನಾಲೆ ತನಕ ಯಾರು ಬರುತ್ತಾರೆ ನೋಡಲು ವೀಕ್ಷಕರು ಕಾದಿದ್ದಾರೆ. ಧನುಶ್, ಸ್ಪಂದನಾ ಸೋಮಣ್ಣ, ಅಶ್ವಿನಿ ಗೌಡ, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ರಾಶಿಕಾ ಶೆಟ್ಟಿ, ಕಾವ್ಯಾ ಶೈವ, ಗಿಲ್ಲಿ ನಟ (ಗಿಲ್ಲಿ ನಾಟಾ) ಅವರ ನಡುವೆ ಪೈಪೋಟಿ ಮುಂದುವರಿದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.