Headlines

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ?

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ?


ಬೆಂಗಳೂರು, ಡಿಸೆಂಬರ್ 29): ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ (ಕೋಗಿಲು ಮನೆ ಧ್ವಂಸ) ರಾಜಕೀಯ ಸ್ವರೂಪ ಸೇರಿದೆ. ಕೇರಳ ಹಾಗೂ ಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿ ಹಿಡಿದ, ಮನೆ ಕಳೆದುಕೊಂಡವರಿಗೆ ಸಿಎಂ ಪರಿಹಾರ ನೀಡುವಂತೆ ಪಕ್ಷದ ಸಿದ್ದರಾಮಯ್ಯ (ಸಿದ್ದರಾಮಯ್ಯ) ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 29) ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಸೂರು ಒದಗಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಡಿಸೆಂಬರ್ 20ರಂದು ಸುಮಾರು 167 ಮನೆಗಳಿಗೆ ಭೇಟಿ ನೀಡಲಾಗಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿದ್ದರು.
ನಿನ್ನೆ ಸ್ಥಳಕ್ಕೆ ಸಚಿವ ಜಮೀರ್, ಇಂದು ಡಿಸಿಎಂ ಭೇಟಿ ನೀಡಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅರ್ಹರಿಗೆ 7 ಕಿ.ಮೀ ಅಂತರದಲ್ಲಿ 11.2 ಲಕ್ಷ ರೂಪಾಯಿ ವೆಚ್ಚದಲ್ಲಿ ತಲಾ ಒಂದು ಮನೆ ನಿರ್ಮಿಸಿ ಕೊಡುತ್ತೇವೆ ಎಂದು ಘೋಷಿಸಿದರು.

ನಾಳೆ, ನಾಡಿದ್ದು ಪರಿಶೀಲಿಸಿ ಅರ್ಹ ವ್ಯಕ್ತಿಗಳಿಗೆ ಪರ್ಯಾಯ ವ್ಯವಸ್ಥೆಗೆ ಸೂಚನೆ ನೀಡಲಾಗುವುದು, ಡಿಸಿ, ಪಾಲಿಕೆ ಅಧಿಕಾರಿಗಳು ನೀಡುವ ಪಟ್ಟಿಗೆ ಮನೆ ಹಂಚಿಕೆ ಮಾಡಲಾಗುವುದು. ಬೈಯಪ್ಪನಹಳ್ಳಿ ಸರ್ವೆ ನಂಬರ್‌ 23ರಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಹೊಸ ವರ್ಷದ ಆರಂಭದ ದಿನ ಮನೆ ನಿರ್ಮಿಸಿರುವ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಒಪ್ಪಿಗೆ ನೀಡಿದ್ದಾರೆ.

ಇದರಲ್ಲಿ ವಿಶೇಷ ಆಸಕ್ತಿ ಇಲ್ಲ. ಕಮ್ಯೂನಿಸ್ಟ್ನವರು ಆಸಕ್ತಿ ವಹಿಸಿದ್ದಾರೆ. ಕೇರಳದಲ್ಲಿ ಚುನಾವಣೆ ಬರುತ್ತಿದೆ. ಹೀಗಾಗಿ ಆಸಕ್ತಿ ವಹಿಸಿದ್ದಾರೆ. ಮನುಷ್ಯತ್ವದ ಆಧಾರದ ಮೇಲೆ ಪರ್ಯಾಯ ವ್ಯವಸ್ಥೆ ಮಾಡಲು. ಇನ್ಮುಂದೆ ಈ ರೀತಿ ಯಾರೂ ಒತ್ತುವರಿ ಮಾಡದಂತೆ ಸೂಚಿಸಿದ್ದೇವೆ. ತಹಶೀಲ್ದಾರ್ ಹಾಗೂ ವಿಎಗೆ ಗೊತ್ತಿಲ್ಲದೆ ಒತ್ತುವರಿ ಸಾಧ್ಯವೇ ಇಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *