ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು

ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು


2025ರಲ್ಲಿ ಭಾರತದಲ್ಲಿ ಬಹಳ ವ್ಯಾಪಕವಾದ ಮತ್ತು ದೊಡ್ಡದೊಡ್ಡ ಸುಧಾರಣೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಯಾವುದಾದರೂ ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರೇ ತಮ್ಮ ಲಿಂಕ್‌ನಲ್ಲಿ ಒಂದು ಬ್ಲಾಗ್ ಬರೆದಿದ್ದು, 2025ರಲ್ಲಿ ಸರ್ಕಾರ ಕೈಗೊಂಡ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಭಾರತವು ಸುಧಾರಣೆ ಎಕ್ಸ್ಪ್ರೆಸ್ ಗಾಡಿ ಹತ್ತಿದೆ. ಈ ದೇಶದ ಜನರೇ ಈ ಎಕ್ಸ್ ಪ್ರೆಸ್ ಎಂಜಿನ್ ಎಂದು ಪ್ರಧಾನಿಗಳು ವ್ಯಾಖ್ಯಾನಿಸಿದ್ದಾರೆ. ಅವರು ಈ ವರ್ಷ ಜಾರಿಯಾದ ಕೆಲ ಸುಧಾರಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಜಿಎಸ್ಟಿ ಸುಧಾರಣೆ, ಆದಾಯ ತೆರಿಗೆ ಇಳಿಕೆ, ಸಣ್ಣ ಉದ್ದಿಮೆಗಳಿಗೆ ರಿಲೀಫ್, ಇನ್ಶೂರೆನ್ಸ್ ಸೆಕ್ಟರ್‌ಗೆ ಎಫ್‌ಡಿಐ, ಸೆಕ್ಯುರಿಟೀಸ್ ಮಾರುಕಟ್ಟೆ ಸುಧಾರಣೆ, ಸಮುದ್ರ ಆರ್ಥಿಕ ಸುಧಾರಣೆ, ಜನ ವಿಶ್ವಾಸ, ಸುಲಭ ಉದ್ಯಮ ವಾತಾವರಣ, ಕಾರ್ಮಿಕ ಸುಧಾರಣೆ, ವ್ಯಾಪಾರ ಮಾರುಕಟ್ಟೆ ವೃದ್ಧಿ, ಪರಮಾನ ಶಕ್ತಿ ಸುಧಾರಣೆ, ಗ್ರಾಮೀಣ ಉದ್ಯೋಗ ಖಾತೆ ಸುಧಾರಣೆ, ಶಿಕ್ಷಣ ಸುಧಾರಣೆ, ಇವುಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಲೇಖನದಲ್ಲಿ ಪ್ರಸ್ತಾಪಿಸಿದ್ದಾರೆ.

ಜಿಎಸ್ಟಿ ಸುಧಾರಣೆ

ಶೇ. 5, ಶೇ. 12, ಶೇ. 18 ಮತ್ತು ಶೇ. 28, ಹೀಗೆ ನಾಲ್ಕು ಇದ್ದ ಜಿಎಸ್ಟಿ ಸ್ಲ್ಯಾಬ್ಗಳನ್ನು ಎರಡಕ್ಕೆ ಇಳಿಸಲಾಗಿದೆ. ಶೇ. 5 ಮತ್ತು ಶೇ. 18 ಟ್ಯಾಕ್ಸ್ ಸ್ಲ್ಯಾಬ್ ಮಾತ್ರ ಇರುವುದು. ಶೇ. 12 ಮತ್ತು ಶೇ. 28 ಟ್ಯಾಕ್ಸ್ ಸ್ಲ್ಯಾಬ್ಗಳನ್ನು ರದ್ದುಗೊಳಿಸಲಾಗಿದೆ. ನರೇಂದ್ರ ಮೋದಿ ಅವರು ಈ ಕ್ರಮದಿಂದ ಗ್ರಾಹಕರು ಉತ್ಸಾಹದಿಂದ ಸಹಾಯ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಯೂರಿಟೀಸ್ ಮಾರುಕಟ್ಟೆ ರಿಫಾರ್ಮ್

ಸೆಕ್ಯೂರಿಟೀಸ್ ಮಾರುಕಟ್ಟೆ ಕೋಡ್ ಬಿಲ್ ಅನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸೆಬಿ ಆಡಳಿತದ ನಿಯಮಗಳನ್ನು ಇದು ಸುಧಾರಿಸುತ್ತದೆ. ಹೂಡಿಕೆದಾರರಿಗೆ ಹೆಚ್ಚಿನ ಭದ್ರತೆ, ಕಟ್ಟುಪಾಡು ಸಡಿಲಿಕೆಗೆ ನೆರವಾಗುತ್ತದೆ. ತಂತ್ರಜ್ಞಾನ ಶಕ್ತ ಮಾರುಕಟ್ಟೆಯನ್ನು ಬಲಗೊಳಿಸಲಾಗಿದೆ ಎಂದು ಲಿಂಕ್ ಪೋಸ್ಟ್‌ನಲ್ಲಿ ನರೇಂದ್ರ ಮೋದಿ ಬರೆದಿದ್ದಾರೆ.

ಇದನ್ನೂ ಓದಿ: ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು

ಸಾಗರ ಆರ್ಥಿಕತೆಯ ಸುಧಾರಣೆಗಳು…

ಈ ವರ್ಷ ಮುಂಗಾರು ಅಧಿವೇಶನದಲ್ಲಿ ಲೇಡಿಂಗ್ ಆಯಕ್ಟ್, ಸಮುದ್ರದ ಮೂಲಕ ಸಾಗಣೆ ಮಸೂದೆ, ಕರಾವಳಿ ಸಾಗಣೆ ಮಸೂದೆ, ವ್ಯಾಪಾರಿ ಸಾಗಣೆ ಮಸೂದೆ ಮತ್ತು ಭಾರತೀಯ ಬಂದರುಗಳ ಮಸೂದೆ, ಹೀಗೆ ಒಂದೇ ಅಧಿವೇಶನದಲ್ಲಿ ಸಮುದ್ರದ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಲ್ಲ ಐದು ಬಿಲ್‌ಗಳನ್ನು ಮಂಡಿಸಲಾಗಿದೆ. ಹಲವಾರು ಹಿಂದಿನ ಕಾಯ್ದೆಗಳಿಗೆ ಸುಧಾರಣೆಗಳನ್ನು ತರಲಾಗಿದೆ.

ಸುಗಮ ವ್ಯಾಪಾರ ವಾತಾವರಣ

ಉದ್ದಿಮೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ಹಲವು ಉತ್ಪನ್ನಗಳಿಗೆ ಕ್ಯುಸಿಯೊಗಳನ್ನು (ಕ್ವಾಲಿಟಿ ಕಂಟ್ರೋಲ್ ಆರ್ಡರ್) ಹಿಂಪಡೆದಿದೆ. ಸಿಂಟೆಟಿಕ್ ಫೈಬರ್, ಯಾರ್ನ್, ಪ್ಲಾಸ್ಟಿಕ್, ಪಾಲಿಮರ್, ಸ್ಟೀಲ್, ಇಂಜಿನಿಯರಿಂಗ್, ಇಲಿಕಲ್ ಇತ್ಯಾದಿ ವಿವಿಧ ಕೆಟಗರಿಗಳನ್ನು 70ಕ್ಕೂ ಹೆಚ್ಚು ಕ್ಯುಸಿಯೋಗಳನ್ನು ಕೈಬಿಡಲಾಗಿದೆ. ಇದರಿಂದ ಪಾದರಕ್ಷೆ, ವಾಹನ ಇತ್ಯಾದಿ ಹಲವು ಸೆಕ್ಟರ್‌ಗಳಲ್ಲಿ ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ, ರಫ್ತು ಬೆಲೆ ಹೆಚ್ಚು ಸ್ಪರ್ಧಾತ್ಮಕವಾಗಿರುತ್ತದೆ.

ಭಾರತೀಯ ಉತ್ಪನ್ನಗಳಿಗೆ ಜಾಗತಿಕವಾಗಿ ಹೆಚ್ಚು ಮಾರುಕಟ್ಟೆ

2025ರಲ್ಲಿ ನ್ಯೂಜಿಲ್ಯಾಂಡ್, ಓಮನ್ ಮತ್ತು ಬ್ರಿಟನ್ ಜೊತೆ ಭಾರತ ಟ್ರೆಡ್ ಡೀಲ್ ಮಾಡಿಕೊಂಡಿದ್ದಾರೆ. ಇದರಿಂದ ಭಾರತದ ಹಲವು ಉತ್ಪನ್ನಗಳಿಗೆ ಈ ದೇಶಗಳು ಆಮದು ಸುಂಕವನ್ನು ರದ್ದುಗೊಳಿಸಬಹುದು, ಅಥವಾ ಕಡಿಮೆ ಮಾಡಬಹುದು. ಇದರಿಂದ ಹೆಚ್ಚಿನ ಮಾರುಕಟ್ಟೆ ಪ್ರವೇಶ ಸಿಗುತ್ತದೆ. ಸ್ವಿಟ್ಜರ್ಲ್ಯಾಂಡ್, ನಾರ್ವೆ, ಐಸ್ಲ್ಯಾಂಡ್ ಮತ್ತು ಲೀಕ್ಟನ್ ಸ್ಟೀನ್ ದೇಶಗಳಿರುವ ಯೂರೋಪಿಯನ್ ಫ್ರೀ ಟ್ರೇಡ್ ಅಸೋಸಿಯೇಶನ್ ಜೊತೆಗೂ ಭಾರತ ಎಫ್ಟಿಎ ಮಾಡಿಕೊಂಡಿದೆ.

ಇದನ್ನೂ ಓದಿ: ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ

ಗ್ರಾಮೀಣ ಉದ್ಯೋಗ ಖಾತ್ರಿಯಲ್ಲಿ ಸುಧಾರಣೆ

ಸರ್ಕಾರವು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಹೊಸ ಸ್ವರೂಪ ಕೊಟ್ಟಿದೆ. ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆ ಜಾರಿಗೆ ತರುತ್ತಿದೆ. ಮನ್ರೇಗಾ ಬದಲು ಈ ಹೊಸ ಕಾಯ್ದೆ ಬರುತ್ತದೆ. ವರ್ಷಕ್ಕೆ ಖಾತ್ರಿ ಉದ್ಯೋಗ ಕೊಡಲಾಗುವ ದಿನಗಳ ಸಂಖ್ಯೆ 100 ರಿಂದ 125ಕ್ಕೆ ಹೆಚ್ಚಿಸಿರುವುದು ಸೇರಿದಂತೆ ಕೆಲವು ಮಹತ್ವದ ಸುಧಾರಣೆಗಳನ್ನು ತರಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಆದಾಯ ಹರಿವು ಸಿಗಲು ಅವಕಾಶ ಇರುತ್ತದೆ.

ಶಿಕ್ಷಣ ಸುಧಾರಣೆಗಳು

ಸಂಸತ್ತಿನಲ್ಲಿ ವಿಕಸಿತ ಭಾರತ ಶಿಕ್ಷಾ ಅಧಿಸ್ಥಾನ ಮಸೂದೆಯನ್ನು ಮಂಡಿಸಲಾಗಿದೆ. ಇದು ಕಾಯ್ದೆಯಾದರೆ, ಏಕೀಕೃತ ಉನ್ನತ ಶಿಕ್ಷಣ ನಿಯಂತ್ರಕ ಸಂಸ್ಥೆಗಳು ಥಾಪಿತವಾಗುತ್ತವೆ. ಯುಜಿಸಿ, ಐಸಿಟಿಐ, ಎನ್‌ಸಿಟಿಇ ಇತ್ಯಾದಿ ವಿವಿಧ ರೆಗ್ಯುಲೇಟರಿ ಸಂಸ್ಥೆಗಳ ಬದಲಿಗೆ ಒಂದೇ ಸಂಸ್ಥೆಯು ನಿಯಂತ್ರಕವಾಗಿ ಇರುತ್ತದೆ.

ಲಿಂಕ್ ಲೇಖನ ಇರುವ ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್

(ಮಾಹಿತಿ ಆಧಾರ: ಲಿಂಕ್‌ನಲ್ಲಿ ಪ್ರಧಾನಿ ಮೋದಿ ಅವರ ಲೇಖನ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *