ಬೆಂಗಳೂರು, ಡಿಸೆಂಬರ್ 31: ಕೋಗಿಲು ಲೇಔಟ್‌ನಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ತೆರವುಗೊಂಡ ಮನೆಗಳ ನಿವಾಸಿಗಳ ಪೌರತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಒಂದು ವರ್ಷದ ಹಿಂದಿನ ಗೂಗಲ್ ಮ್ಯಾಪ್ ದಾಖಲೆಗಳನ್ನು ಪ್ರದರ್ಶಿಸಿರುವ ಅವರು, ಈ ಪ್ರದೇಶದ ಕಟ್ಟಡಗಳ ನಿರ್ಮಾಣ ಇತ್ತೀಚೆಗೆ ಎಂದು. ಇಲ್ಲಿ ವಾಸಿಸುತ್ತಿರುವವರು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಎಂದು ಆರೋಪಿಸಿದ್ದಾರೆ.
ಅಕ್ರಮ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಇತರ ಮೂಲಭೂತ ಸೌಕರ್ಯಗಳ ಬಗ್ಗೆ ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯದ ತೆರಿಗೆದಾರರಿಗೆ ಈ ಸೌಲಭ್ಯಗಳು ಸಿಗುತ್ತಿಲ್ಲ. ಸುಮಾರು 600 ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ಬಾಂಗ್ಲಾದೇಶದವರಿಗೆ ಸಿದ್ದರಾಮಯ್ಯ ಸರ್ಕಾರ ನೀಡಲು ಹೊರಟಿದೆ. ಇದು ಬೆಂಗಳೂರನ್ನು ಮಿನಿ ಬಾಂಗ್ಲಾದೇಶವನ್ನಾಗಿ ಮಾಡುವ ಪ್ರಯತ್ನ ಎಂದು ಅಶೋಕ್ ಕಿಡಿ ಕಾರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.