KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ


ಬಾಗಲಕೋಟೆ, ಡಿಸೆಂಬರ್ 31: ಕೆಎಸ್ ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದರೆ, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *