ಬೆಂಗಳೂರು, ಡಿಸೆಂಬರ್ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು ಸಲ್ಲಿಸಿದೆ. ದ್ವೇಷ ಭಾಷಣವನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಮಾಡಲಾಗಿದೆ. ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆದರೂ ಮುಖ್ಯಮಂತ್ರಿಗಳು ಯಾವುದೇ ವಿಶೇಷ ಕಾರ್ಯಕ್ರಮ ಪ್ರಕಟಿಸಿಲ್ಲ ಎಂದು ಜೆಡಿಎಸ್ ಆರೋಪಿಸಿದೆ. ಜೊತೆಗೆ, ಕೋಗಿಲು ಲೇಔಟ್ನಲ್ಲಿ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ, ಇದು ಜನವಿರೋಧಿ ನೀತಿ ಎಂದು ಕರೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.