Headlines

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ!

ವೋಟ್​​ ಚೋರಿ ಎಂದ ‘ಕೈ’ಗೆ ಬಿಜೆಪಿ ಗುದ್ದು: ಕಾಂಗ್ರೆಸ್​ ವಿರುದ್ಧವೇ ಮತದಾರರ ಪಟ್ಟಿ ಅಕ್ರಮ ಆರೋಪ!


ಬಾಗಲಕೋಟೆ, ಡಿಸೆಂಬರ್ 31: ಬಿಜೆಪಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ವೋಟ್ ಚೋರಿ ಅಭಿಯಾನ ನಡೆಸಿತ್ತು. ಕರ್ನಾಟಕದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ನಡುವೆ ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಮತದಾರರ ಪಟ್ಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ದೂರಿದೆ. ದಾಖಲೆ ಸಮೇತ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರನ್ನೂ ನೀಡಿದೆ.

ಹುನಗುಂದ ಮತಕ್ಷೇತ್ರದಲ್ಲಿ ಪ್ರತಿ ಬೂತ್ ನಿಂದ ಅಕ್ರಮವಾಗಿ 18 ವಯೋಮಿತಿ ಒಳಗಿನ 50 ಜನರನ್ನ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ ಭಾರತೀಯ ಜನತಾ ಪಕ್ಷಕ್ಕೆ ಇದೆ. ನವನಗರದ ಬಸ್ ನಿಲ್ದಾಣ ವೃತ್ತದಿಂದಮಠ ಭವನದವರೆಗೆ ಮಾಜಿ ಶಾಸಕರಾದ ವೀರಣ್ಣ ಚರಂತಿ ಮತ್ತು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು, ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮ ಸದ್ದು; ವೋಟರ್ ಲಿಸ್ಟ್ ನಲ್ಲಿ ಅಪ್ರಾಪ್ತರು, ಬೇರೆಯವರ ಹೆಸರು!

ಬಿಜೆಪಿ ಆರೋಪಗಳೇನು?

  • 18 ವರ್ಷ ವಯಸ್ಸಿನ ಕಡಿಮೆ ಇರುವ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ
  • ಬೇರೆ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಯಿತು
  • ಹುನಗುಂದ ಮತಕ್ಷೇತ್ರದಲ್ಲಿ ಹಲವಾರು ಗ್ರಾಮ ಮತ್ತು ನಗರಗಳಲ್ಲಿ ಅವರು ವಾಸಿಸುವ ವಾರ್ಡನ್ನು ಬಿಟ್ಟು ಪಕ್ಕದ ವಾರ್ಡಿಗೆ ಕೂಡ ಸೇರಿಸುವ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯುತ್ತಿದೆ
  • ಒಂದೇ ಮತದಾರರ ಹೆಸರು ಎರಡು ವಾರ್ಡ್‌ಗಳಲ್ಲಿ ಕಂಡುಬಂದಿದೆ

ಮತದಾರರ ಪಟ್ಟಿ ಅಕ್ರಮ ಸಂಬಂಧ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಅಮಾನತು ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಬೇಕು. ಒಂದು ವೇಳೆ ನ್ಯಾಯಯುತ ತನಿಖೆ ಆಗಿದ್ದಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕರು ಎಚ್ಚರಿಕೆ ನೀಡಿದ್ದಾರೆ. ಮುರಡಿ ಗ್ರಾಮ ಪಂಚಾಯತ್ ಮತದಾರರ ಪಟ್ಟಿ ಅಕ್ರಮದ ಬಗ್ಗೆ ಈ ಮೊದಲು ಹುನಗುಂದ ತಾಲೂಕು ಪಂಚಾಯತ್ ಮಾಜಿ ಸದಸ್ಯರು ಹಾಗೂ ಸ್ಥಳೀಯರು ಕೂಡ ಆರೋಪಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *