ಬೆಂಗಳೂರು, ಡಿಸೆಂಬರ್ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಯಿತು. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಮತ್ತು ಯುವಜನತೆಗೆ ಪಬ್ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಘಟನೆಗಳು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 6,000ಕ್ಕೂ ಹೆಚ್ಚು ಸಿಬ್ಬಂದಿ ಕಣ್ಗಾವಲಿರಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.