ಇತ್ತೀಚಿಗೆ ಶುಗರ್ (ಸಕ್ಕರೆ) ಚಾಲೆಂಜ್ ನಡೆಯುತ್ತಿರುವುದು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು, ತೂಕ ಇಳಿಸಿಕೊಳ್ಳಲು, ದೇಹದಲ್ಲಿರುವ ಶಕ್ತಿ ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಆದರೆ ಸಿಹಿ ತಿನ್ನುವ ಬಯಕೆ ಅಥವಾ ಹಂಬಲವನ್ನು ನಿಯಂತ್ರಿಸುವುದು ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಅಷ್ಟು ಸುಲಭವಲ್ಲ, ಅದೊಂದು ಸವಾಲು. ಆದರೆ ಸಿಹಿ ತಿಂಡಿ ಸೇವನೆ ಮಾಡುವುದನ್ನು ಕಡಿಮೆ ಮಾಡುವ ಮೂಲಕ ಅಥವಾ ತ್ಯಜಿಸುವ ಮೂಲಕ ಒಬ್ಬ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಕ್ಕರೆಯ ಸೇವನೆ ಅಥವಾ ಸಿಹಿ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಿದ ನಂತರ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳು ಆಗುತ್ತವೆ, ಈ ಬಗ್ಗೆ ಅಭಿಪ್ರಾಯವೇನು ಎಂಬುದನ್ನು ತಿಳಿದುಕೊಳ್ಳಿ.
ಸಾಮಾನ್ಯವಾಗಿ ಹಣ್ಣು, ತರಕಾರಿ ಮತ್ತು ಡೈರಿ ಉತ್ಪನ್ನಗಳಂತಹ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುವ ಎಲ್ಲಾ ಆಹಾರಗಳಲ್ಲಿ ಸಕ್ಕರೆ ನೈಸರ್ಗಿಕವಾಗಿ ಕಂಡುಬರುತ್ತದೆ. ಈ ರೀತಿ ನೈಸರ್ಗಿಕವಾಗಿ ಎಲ್ಲರಿಗೂ ಸಿಹಿಅಂಶವಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಲ್ಲ. ಆದರೆ ನಾವು ಸೇವಿಸುವ ಆಹಾರಗಳಿಗೆ ಹೆಚ್ಚಿನ ಸಕ್ಕರೆ ಸೇರಿಸುವುದರಿಂದ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆ ಅಥವಾ ಸಿಹಿ ಸೇವನೆಯನ್ನು ಕಡಿಮೆ ಮಾಡುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆರಂಭದಲ್ಲಿ, ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿದಾಗ ಒಮ್ಮೆಯಾದರೂ ತಲೆನೋವು, ಆಯಾಸ ಅಥವಾ ಮಾನಸಿಕ ಬದಲಾವಣೆ ಅನುಭವಕ್ಕೆ ಬರುತ್ತದೆ, ಆದರೆ ಅಂತಿಮವಾಗಿ ಅಂದರೆ ದೀರ್ಘಾವಧಿಯಲ್ಲಿ ಉತ್ತಮ ಫಲಿತಾಂಶ ನೀಡುವುದರಲ್ಲಿ ಸಂಶಯವಿಲ್ಲ.
ಇದನ್ನೂ ಓದಿ: ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳನ್ನು ತಿನ್ನಬೇಡಿ
ಸಕ್ಕರೆ ಸೇವನೆ ಮಾಡದಿದ್ದರೆ ಏನಾಗುತ್ತದೆ?
10 ದಿನ ಸಕ್ಕರೆ ಸೇವನೆ ಮಾಡುವುದನ್ನು ನಿಲ್ಲಿಸಿದರೆ ಕೊಲೆಸ್ಟ್ರಾಲ್ ಮತ್ತು ತೀವ್ರತರವಾದ ಬದಲಾವಣೆಗಳು ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ. ನಮ್ಮ ಜೀರ್ಣಾಂಗ ವ್ಯವಸ್ಥೆಯ ಆರೋಗ್ಯವು ಆರು ದಿನಗಳಲ್ಲಿ ಸುಧಾರಿಸುತ್ತದೆ, ಮಾನಸಿಕ ಸ್ಥಿತಿಯು ಒಂದು ವಾರದೊಳಗೆ ಬದಲಾಗಬಹುದು ಮತ್ತು ಚರ್ಮವು ಹತ್ತು ದಿನಗಳಲ್ಲಿ ಕಾಂತೀಯವಾಗಿ ಕಂಡುಬರುತ್ತದೆ ಎಂದು ಸಂಶೋಧನೆ ಹೇಳುತ್ತದೆ. ದೇಹದ ತೂಕದಲ್ಲಿನ ಬದಲಾವಣೆಗಳನ್ನು ಕನಿಷ್ಠ ಒಂದು ತಿಂಗಳ ಕಾಲ ಸಕ್ಕರೆಯಿಂದ ದೂರವಿರುವುದರ ಜೊತೆಗೆ ಆರೋಗ್ಯಕರ ಆಹಾರವನ್ನು ಸೇವಿಸಲಾಗುತ್ತದೆ. ವಯಸ್ಕರು ದಿನಕ್ಕೆ 30 ಗ್ರಾಂಗಿಂತ ಹೆಚ್ಚು ಸಕ್ಕರೆಯನ್ನು ಸೇವಿಸಬಾರದು ಮತ್ತು ಎರಡರಿಂದ ಮೂರು ವರ್ಷ ವಯಸ್ಸಿನ ಮಕ್ಕಳು ದಿನಕ್ಕೆ 14 ಗ್ರಾಂಗಿಂತ ಹೆಚ್ಚು ಸಕ್ಕರೆಯನ್ನು ಸೇವಿಸಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ